ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ! ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು..?

ಅಮೆರಿಕನ್ ಡಾಲರ್ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿತ ಕಂಡಿದ್ದು, 82.42ರಂತೆ ವಹಿವಾಟು ನಡೆಸುತ್ತಿದೆ.

Written by - Puttaraj K Alur | Last Updated : Oct 16, 2022, 06:43 AM IST
  • ಅಮೆರಿಕನ್ ಡಾಲರ್ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿತ ಕಂಡಿದೆ
  • ರೂಪಾಯಿ ಕುಸಿಯುತ್ತಿಲ್ಲ, ಆದರೆ ಡಾಲರ್ ಬಲಗೊಳ್ಳುತ್ತಿದೆ ಎಂದ ನಿರ್ಮಲಾ ಸೀತಾರಾಮನ್
  • ಇತರ ದೇಶಗಳ ಕರೆನ್ಸಿ ಎದುರು ರೂಪಾಯಿ ಉತ್ತಮ ಪ್ರದರ್ಶನ ನೀಡುತ್ತಿದೆ ಎಂದ ಕೇಂದ್ರ ಹಣಕಾಸು ಸಚಿವರು
ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ! ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು..? title=
Dollar vs Rupee

ನವದೆಹಲಿ: ಅಮೆರಿಕನ್ ಡಾಲರ್ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿತ ಕಂಡಿದೆ. ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಭಾನುವಾರ ಭಾರತದ ರೂಪಾಯಿ ಮೌಲ್ಯವು 82.42ರಂತೆ ವಹಿವಾಟು ನಡೆಸುತ್ತಿದೆ.

ಡಾಲರ್ ಎದುರು ರೂಪಾಯಿ ಮೌಲ್ಯದಲ್ಲಿ ಭಾರೀ ಕುಸಿತ ಕಂಡಿರುವ ವಿಷಯವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ ನೀಡಿದ್ದಾರೆ. ‘ರೂಪಾಯಿ ಕುಸಿಯುತ್ತಿಲ್ಲ, ಆದರೆ ಡಾಲರ್ ಬಲಗೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ. ಇತರ ದೇಶಗಳ ಕರೆನ್ಸಿ ಎದುರು ರೂಪಾಯಿ ಉತ್ತಮ ಪ್ರದರ್ಶನ ನೀಡುತ್ತಿದೆ. ಇದಕ್ಕೆ ಭೌಗೋಳಿಕ ರಾಜಕೀಯ ಒತ್ತಡವೂ ಕಾರಣವಾಗಿದೆ. ಇದನ್ನು ಎದುರಿಸಲು ಎಲ್ಲಾ ರೀತಿ ಕ್ರಮಕೈಗೊಳ್ಳಲಾಗುತ್ತಿದೆ ಅಂತಾ ಹಣಕಾಸು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: Ration Cardholder: ದೇಶದ ಕೋಟ್ಯಾಂತರ ಪಡಿತರ ಚೀಟಿ ಧಾರಕರಿಗೊಂದು ಸಂತಸದ ಸುದ್ದಿ

ಕಳೆದ ಹಲವಾರು ತಿಂಗಳಿಂದ ರೂಪಾಯಿ ಮೌಲ್ಯದಲ್ಲಿ ಭಾರೀ ಕುಸಿತ ಉಂಟಾಗುತ್ತಿದೆ. ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಕರೆನ್ಸಿಯ ಬಲ, ಅಮೆರಿಕ ಫೆಡರಲ್ ರಿಸರ್ವ್‌ ಬಡ್ಡಿದರ ಹೆಚ್ಚಿಸಿರುವುದು, ದೇಶೀಯ ಷೇರುಗಳಲ್ಲಿನ ನಕಾರಾತ್ಮಕ ಪ್ರವೃತ್ತಿ ಹಿನ್ನೆಲೆ ದೇಶೀಯ ಕರೆನ್ಸಿಯ ಮೌಲ್ಯ ಕುಸಿತಕ್ಕೆ ಕಾರಣವಿರಬಹುದು ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

ದೇಶಕ್ಕೆ 75 ಡಿಜಿಟಲ್ ಬ್ಯಾಂಕ್ ಸಮರ್ಪಿಸಲಿರುವ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿಯವರು ಇಂದು (ಅ.16) 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ. ಇದಾದ ಬಳಿಕ ಪ್ರಧಾನಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 75 DBU ಮೂಲಕ ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯವು ದೇಶದ ಮೂಲೆ ಮೂಲೆಯ ಜನರನ್ನು ತಲುಪಲು ಸಾಧ್ಯವಾಗಲಿದೆ.

ಇದನ್ನೂ ಓದಿ: SBI ಗ್ರಾಹಕರಿಗೆ ದೀಪಾವಳಿಯ ಧಮಾಕ ಗಿಫ್ಟ್: ಠೇವಣಿ ಬಡ್ಡಿ ದರದಲ್ಲಿ ಬಂಪರ್ ಏರಿಕೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News