ಶೀಘ್ರವೇ ಭಾರೀ ಅಗ್ಗವಾಗಲಿದೆ ಪೆಟ್ರೋಲ್, ಡೀಸೆಲ್ ಬೆಲೆ : ಸರ್ಕಾರದ ಮಾಹಿತಿ ಪ್ರಕಾರ ಎಷ್ಟಾಗಲಿದೆ ದರ ?

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದೀರ್ಘಕಾಲದಿಂದ ಸ್ಥಿರವಾಗಿವೆ. ಆದರೆ, ಈಗ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ ಕಾಣಬಹುದು ಎಂದು ಹೇಳಲಾಗಿದೆ. ಮೋದಿ ಸರ್ಕಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯ ಸೂಚನೆಗಳು ಬಂದಿವೆ.

Written by - Ranjitha R K | Last Updated : Jun 12, 2023, 11:53 AM IST
  • ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಜನ ಸಾಮಾನ್ಯರ ಮೇಲೆ ಪರಿಣಾಮ ಬೀರುತ್ತದೆ.
  • ಇದು ದೈನಂದಿನ ಬಜೆಟ್ ಮೇಲೆಯೇ ಪರಿಣಾಮ ಬೀರುತ್ತದೆ.
  • ಎಷ್ಟಾಗಲಿದೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು
ಶೀಘ್ರವೇ ಭಾರೀ ಅಗ್ಗವಾಗಲಿದೆ ಪೆಟ್ರೋಲ್, ಡೀಸೆಲ್ ಬೆಲೆ : ಸರ್ಕಾರದ ಮಾಹಿತಿ ಪ್ರಕಾರ ಎಷ್ಟಾಗಲಿದೆ ದರ ?  title=

ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾದಾಗ ಅದು ಜನ ಸಾಮಾನ್ಯರ ಮೇಲೆ ಅತಿ ಹೆಚ್ಚು ಪರಿಣಾಮ ಬೀರುತ್ತದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದಂತೆಯೇ ಸಾರಿಗೆ ಸಂಪರ್ಕಗಳ ಬೆಲೆ ಕೂಡಾ ಏರುತ್ತದೆ. ಇದು ದೈನಂದಿನ ಬಜೆಟ್ ಮೇಲೆಯೇ ಪರಿಣಾಮ ಬೀರುತ್ತದೆ. ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬದಲಾವಣೆಯಾದರೆ ಹಲವು ವಸ್ತುಗಳ ಬೆಲೆಯಲ್ಲಿ ಬದಲಾವಣೆಯಾಗಿದೆ. ಅದೇ ಸಮಯದಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದೀರ್ಘಕಾಲದಿಂದ ಸ್ಥಿರವಾಗಿವೆ. ಆದರೆ, ಈಗ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ ಕಾಣಬಹುದು ಎಂದು ಹೇಳಲಾಗಿದೆ. ಮೋದಿ ಸರ್ಕಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯ ಸೂಚನೆಗಳು ಬಂದಿವೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು : 
ದೇಶದ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 90 ರೂಪಾಯಿ ದಾಟಿದ್ದರೆ, ಹಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿಗಿಂತ ಹೆಚ್ಚಿದೆ. ಆದರೂ ಏಪ್ರಿಲ್ 2022ರ ನಂತರ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ತೈಲ ಕಂಪನಿಗಳು ನಿರ್ಧರಿಸುತ್ತವೆ. ಆದರೆ, ಈಗ ಸರ್ಕಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗುವ ಸೂಚನೆಗಳು ಬಂದಿವೆ.

ಇದನ್ನೂ ಓದಿ : RBI ರೆಪೋ ದರಗಳನ್ನು ಯಾವಾಗ ಕಡಿತಗೊಳಿಸಲಿದೆ? ಈ ಸುದ್ದಿ ಓದಿ

 ತೈಲ ಬೆಲೆ : 
ಮೋದಿ ಸರ್ಕಾರದಲ್ಲಿ ಪೆಟ್ರೋಲಿಯಂ ಸಚಿವರಾಗಿರುವ ಹರ್ದೀಪ್ ಸಿಂಗ್ ಪುರಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಲಿದೆ ಎಂದು ಸೂಚಿಸಿದ್ದಾರೆ. ತೈಲ ಕಂಪನಿಗಳ ನಷ್ಟವನ್ನು ಭರಿಸಲಾಗುತ್ತಿದೆ ಎಂದು ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡುವ ಬಗ್ಗೆ ಪರಿಗಣಿಸಬಹುದು ಎಂದು ಹೇಳಿದ್ದಾರೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಸ್ಥಿರವಾಗಿದ್ದರೆ, ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಯಾಗಬಹುದು ಎಂದು ಅವರು ಹೇಳಿದ್ದಾರೆ. 

ತೈಲ ಕಂಪನಿಗಳು 2024ರ ಲೋಕಸಭೆ ಚುನಾವಣೆಗೂ ಮುನ್ನ ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಿದರೆ, ಸರ್ಕಾರಕ್ಕೂ ಇದರಿಂದ ಸಾಕಷ್ಟು ರಿಲೀಫ್ ಸಿಗಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಸಾಕಷ್ಟು ವಾಗ್ದಾಳಿ ನಡೆಸುತ್ತಿವೆ. ಆದರೆ, ಇದೀಗ ಪೆಟ್ರೋಲಿಯಂ ಸಚಿವರ ಸೂಚನೆ ಮೇರೆಗೆ ತೈಲ ಕಂಪನಿಗಳು ಶೀಘ್ರವೇ ತೈಲ ಬೆಲೆ ಇಲಿಸಲಿವೆ ಎನ್ನುವುದು ಸ್ಪಷ್ಟ. 

ಇದನ್ನೂ ಓದಿ : Central Data: 2022 ರ ಡಿಜಿಟಲ್‌ ಪಾವತಿ ವಹಿವಾಟಿನಲ್ಲಿ ಭಾರತಕ್ಕೆ ಮೊದಲ ಸ್ಥಾನ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News