Shocking: ತಾಯಿಯ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ!

Bihar Gang Rape Case: ತಮಗೆ ನ್ಯಾಯ ಒದಗಿಸಬೇಕೆಂದು ಮಹಿಳೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಅಂತಾ ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ​

Written by - Puttaraj K Alur | Last Updated : May 19, 2024, 08:57 PM IST
  • ತಾಯಿಯ ಎದುರೇ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
  • ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ ವಾಹನದಲ್ಲಿ ಅತ್ಯಾಚಾರ
  • ತನ್ನ ಮಗಳಿಗೆ ನ್ಯಾಯ ಕೊಡಿಸುವಂತೆ ಪೊಲೀಸರಿಗೆ ಮಹಿಳೆಯಿಂದ ಮನವಿ
Shocking: ತಾಯಿಯ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ! title=
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ!

ನವದೆಹಲಿ: ತಾಯಿಯ ಎದುರೇ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ ವಾಹನದಲ್ಲಿ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಈ ವೇಳೆ ತಡೆಯಲು ಮುಂದಾದ ತಾಯಿಗೆ ಮನಬಂದಂತೆ ಥಳಿಸಿದ್ದಾರೆ.
ಇದನ್ನೂ ಓದಿ: ಚಲಿಸುತ್ತಿರುವ ಬಸ್ ಗೆ ಧಿಡೀರ್ ಬೆಂಕಿ...8 ಜನರ ಧಾರುಣ ಸಾವು 

ಇಬ್ಬರೂ ಪ್ರಜ್ಞಾಹೀನ ಸ್ಥಿತಿಗೆ ತಲುಪಿದಾಗ ಅವರನ್ನು ಶೇಖುಪ್ರಾ ಸೇತುವೆ ಬಳಿ ರಸ್ತೆಬದಿ ಎಸೆದು ಓಡಿ ಹೋಗಿದ್ದಾರೆ. ನಂತರ 112 ವಾಹನದಲ್ಲಿ ತಾಯಿ ಮತ್ತು ಮಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಳಿಕ ನೌಬತ್‌ಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಲಕಿಗೆ ಏಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: IT Raid: 40 ಕೋಟಿ ರೂ. ಸೀಜ್‌; ಕಂತೆ ಕಂತೆ ನೋಟು ನೋಡಿ ಅಧಿಕಾರಿಗಳು ದಂಗು!

ತಮಗೆ ನ್ಯಾಯ ಒದಗಿಸಬೇಕೆಂದು ಮಹಿಳೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಅಂತಾ ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಕೆಲವರನ್ನು ವಿಚಾರಣೆ ನಡೆಸಲಾಗುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
  

Trending News