ಕುಟುಂಬ ಸದಸ್ಯರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿದ ಅರ್ಜುನ್ ಸರ್ಜಾ ಪುತ್ರಿಯ ನಿಶ್ಚಿತಾರ್ಥ

Arjun Sarja's daughter Engagement: ಕುಟುಂಬ ಸದಸ್ಯರು, ನಟ & ಸಂಬಂಧಿ ಧ್ರುವ ಸರ್ಜಾ ಹಾಗೂ ಅರ್ಜುನ್ ಸರ್ಜಾ ಆಪ್ತರಾದ ನಟ ವಿಶಾಲ್ ಸೇರಿದಂತೆ ಕೆಲವು ಗೆಳೆಯರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.

Written by - YASHODHA POOJARI | Edited by - Puttaraj K Alur | Last Updated : Oct 29, 2023, 07:35 PM IST
  • ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯರ ನಿಶ್ಚಿತಾರ್ಥ
  • ನಟ ಉಮಾಪತಿ ರಾಮಯ್ಯ ಜೊತೆಗೆ ಉಗುರ ಬದಲಿಸಿಕೊಂಡ ಐಶ್ವರ್ಯ
  • ಚೆನ್ನೈನ ಆಂಜನೇಯನ ದೇವಸ್ಥಾನದಲ್ಲಿರುವ ಸೀತಾ-ರಾಮರ ಸನ್ನಿಧಾನದಲ್ಲಿ ಸರಳ ಕಾರ್ಯಕ್ರಮ
ಕುಟುಂಬ ಸದಸ್ಯರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿದ ಅರ್ಜುನ್ ಸರ್ಜಾ ಪುತ್ರಿಯ ನಿಶ್ಚಿತಾರ್ಥ  title=
ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯರ ನಿಶ್ಚಿತಾರ್ಥ

ಬೆಂಗಳೂರು: ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಅರ್ಜುನ್ ಅವರ ನಿಶ್ಚಿತಾರ್ಥ ಇತ್ತೀಚೆಗೆ ಉಮಾಪತಿ ಅವರೊಂದಿಗೆ ನೆರವೇರಿದೆ.‌ ಚೆನ್ನೈನಲ್ಲಿ ಅರ್ಜುನ್ ಸರ್ಜಾ ನಿರ್ಮಿಸಿರುವ ಆರಾಧ್ಯ ದೈವ ಆಂಜನೇಯನ ದೇವಸ್ಥಾನದಲ್ಲಿರುವ ಸೀತಾ-ರಾಮರ ಸನ್ನಿಧಾನದಲ್ಲಿ ಐಶ್ವರ್ಯ ಹಾಗೂ ಉಮಾಪತಿ ಅವರು ಉಂಗುರ ಬದಲಾವಣೆ ಮಾಡಿಕೊಂಡರು.

ಕುಟುಂಬ ಸದಸ್ಯರು, ನಟ & ಸಂಬಂಧಿ ಧ್ರುವ ಸರ್ಜಾ ಹಾಗೂ ಅರ್ಜುನ್ ಸರ್ಜಾ ಆಪ್ತರಾದ ನಟ ವಿಶಾಲ್ ಸೇರಿದಂತೆ ಕೆಲವು ಗೆಳೆಯರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು. ಐಶ್ವರ್ಯ ಅವರು ಈಗಾಗಲೇ ನಟಿಯಾಗಿ ಜನಪ್ರಿಯರಾಗಿದ್ದು, ಉಮಾಪತಿ ಅವರು ನಟನಾಗಿ ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Tamannah: ಕಪ್ಪು ಸೀರೆಯಲ್ಲಿ ಹಾಲಿನಂತೆ ಹೊಳೆಯುತಿದೆ ಮಿಲ್ಕಿ ಬ್ಯೂಟಿ ಅಂದ...! ಪೋಟೋಸ್‌ ನೋಡಿ

ಉಮಾಪತಿಯವರು ಚಿತ್ರವೊಂದನ್ನು ನಿರ್ದೇಶನ ಕೂಡ ಮಾಡಿದ್ದು, ಇದು ಸದ್ಯದಲ್ಲೇ ಬಿಡುಗಡೆಯಾಗಲಿದೆ. ಅವರ ತಂದೆ ತಂಬಿ ರಾಮಯ್ಯ ಹೆಸರಾಂತ ಹಾಸ್ಯನಟರಾಗಿ ಜನಮನ್ನಣೆ ಪಡೆದಿದ್ದಾರೆ. ನಿಶ್ಚಿತಾರ್ಥದಲ್ಲಿ ಉಮಾಪತಿ ಹಾಗೂ ಐಶ್ವರ್ಯ ಅವರ ಸುಂದರ ಉಡುಗೆ ಎಲ್ಲರ ಗಮನ ಸೆಳೆಯಿತು. ಉಮಾಪತಿ ಅವರಿಗೆ ಮನೀಶ್ ಮಲ್ಹೋತ್ರ ಹಾಗೂ ಐಶ್ವರ್ಯ ಅವರಿಗೆ ಜಯಂತಿ ರೆಡ್ಡಿ ಅವರು ವಸ್ತ್ರವಿನ್ಯಾಸ ಮಾಡಿದ್ದರು.

ಆಕರ್ಷಕವಾಗಿದ್ದ ರೂಬಿ ಹರಳಿನ ಬಂಗಾರದ ನಿಶ್ಚಿತಾರ್ಥದ ಉಂಗುರಗಳನ್ನು ಜೈಪುರದಿಂದ ತರಿಸಲಾಗಿತ್ತು. 2024ರ ಮಾರ್ಚ್ ಅಥವಾ ಏಪ್ರಿಲ್ ತಿಂಗಳಿನಲ್ಲಿ ಐಶ್ವರ್ಯ ಹಾಗೂ ಉಮಾಪತಿ ಅವರ ಕಲ್ಯಾಣ ಮಹೋತ್ಸವ ನೆರವೇರಲಿದೆ ಎಂದು ನಟ ಅರ್ಜುನ್ ಸರ್ಜಾ ತಿಳಿಸಿದ್ದಾರೆ.

ಇದನ್ನೂ ಓದಿ: ಅಪ್ಪು 2ನೇ ಪುಣ್ಯಸ್ಮರಣೆ: ಅಪ್ಪು ಸ್ಮಾರಕದ ಮುಂದೆ ಅವರಿಗಿಷ್ಟವಾದ ತಿನಿಸು ಇಟ್ಟ ಮುದ್ದು ಮಕ್ಕಳು..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News