ರಾಜ್ಯದಲ್ಲಿ 39 ಲಕ್ಷ ಹೆಕ್ಟೇರ್ ಬೆಳೆ ಹಾನಿ, ₹30,482 ಕೋಟಿ ನಷ್ಟ: ಸರ್ಕಾರದ ಮಾಹಿತಿ

ರಾಜ್ಯದ ಒಟ್ಟು 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಈ ಬರಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಅನುಷ್ಠಾನ ಮಾಡಲು ರೂ. 4,860 ಕೋಟಿ ರೂ. ನೆರವಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಿಎಂ ಸಿದ್ದರಾಮಯ್ಯರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ

Last Updated : Sep 23, 2023, 05:54 PM IST
  • ರಾಜ್ಯದಲ್ಲಿ 39 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದ್ದು, 30,482 ಕೋಟಿ ರೂ. ನಷ್ಟವಾಗಿದೆ
  • ರಾಜ್ಯದ ಒಟ್ಟು 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ
  • ಬರಪೀಡಿತ ಪ್ರದೇಶಗಳ ಪರಿಹಾರಕ್ಕೆ 4,860 ಕೋಟಿ ರೂ. ನೆರವಿಗಾಗಿ ಕೇಂದ್ರದ ಶಿಫಾರಸ್ಸಿಗೆ ನಿರ್ಧಾರ
ರಾಜ್ಯದಲ್ಲಿ 39 ಲಕ್ಷ ಹೆಕ್ಟೇರ್ ಬೆಳೆ ಹಾನಿ, ₹30,482 ಕೋಟಿ ನಷ್ಟ: ಸರ್ಕಾರದ ಮಾಹಿತಿ title=
ರಾಜ್ಯದಲ್ಲಿ 39 ಲಕ್ಷ ಹೆಕ್ಟೇರ್ ಬೆಳೆ ಹಾನಿ!

ಬೆಂಗಳೂರು: ಪ್ರಸಕ್ತ ವರ್ಷ ಭಾರಿ ಪ್ರಮಾಣದ ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 39 ಲಕ್ಷ ಹೆಕ್ಟೇರ್ನಲ್ಲಿ ಬೆಳೆ ಹಾನಿಯಾಗಿದ್ದು, 30,482 ಕೋಟಿ ರೂ. ನಷ್ಟವಾಗಿದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಚೇರಿ ಟ್ವೀಟ್ ಮಾಡಿದ್ದು, ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳ ಬಗ್ಗೆ ತಿಳಿಸಿದೆ.

ರಾಜ್ಯದ ಒಟ್ಟು 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಈ ಬರಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಅನುಷ್ಠಾನ ಮಾಡಲು 4,860 ಕೋಟಿ ರೂ. ನೆರವಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಿಎಂ ಸಿದ್ದರಾಮಯ್ಯರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳು ಸೇವೆ ನಡೆಸಿ ಆಕ್ರೋಶ ಹೊರಹಾಕಿದ ಕನ್ನಡಪರ ಸಂಘಟನೆಗಳು

ರಾಜ್ಯದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಪ್ರವರ್ಗ -3(ಎ)ಗೆ ಸೇರಿರುವ ಕುಂಚಿಟಿಗ ಸಮುದಾಯದ ಕುರಿತು ಡಿ.ದೇವರಾಜ ಅರಸು ಸಂಶೋಧನಾ ಸಂಸ್ಥೆಯು ಮೈಸೂರು ವಿವಿ ಸಹಯೋಗದಲ್ಲಿ ನಡೆಸಿದ ಕುಲಶಾಸ್ತ್ರೀಯ ಅಧ್ಯಯನ ವರದಿ ಆಧರಿಸಿ ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಜಾತಿ ಪಟ್ಟಿಗೆ ಸೇರ್ಪಡೆ ಮಾಡುವಂತೆ ಶಿಫಾರಸು ಮಾಡಲು ಸಿಎಂ ಸಿದ್ದರಾಮಯ್ಯರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಲಾಗಿದೆ.

ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳು

  • ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆ ಹೆಚ್ಚಿಸಲು ಮತ್ತು ರೈತರ ನವೋದ್ಯಮಿಗಳಾಗಲು ನೆರವು ನೀಡಲು 10 ಕೋಟಿ ರೂ. ವೆಚ್ಚದಲ್ಲಿ ಕೃಷಿ ನವೋದ್ಯಮ ಯೋಜನೆ ಜಾರಿಗೆ ಅನುಮೋದನೆ.
  • ರಾಯಚೂರಿನ ಬಳಿಯ ಕಲ್ಮಲಾ ಜಂಕ್ಷನ್‍ನಿಂದ ಸಿಂಧನೂರು ಬಳಿಯ ಬಳ್ಳಾರಿ-ಲಿಂಗಸಗೂರು ರಸ್ತೆ ವೃತ್ತದವರೆಗಿನ 78.45 ಕಿಮೀ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು 1,695 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ನಿರ್ಧಾರ.
  • ಧಾರವಾಡ ಕೃಷಿ ವಿವಿಯ 49 ಎಕರೆ 15 ಗುಂಟೆ ಜಮೀನನ್ನು ರಾಷ್ಟ್ರೀಯ ವಿಧಿ ವಿಜ್ಞಾನ ವಿವಿಯ ಸ್ಥಾಪನೆಗೆ 30 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೀಡಲು ಒಪ್ಪಿಗೆ, ರಾಜ್ಯದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಮೀಸಲು ನೀಡಲು ಷರತ್ತು.
  • ಹಿಂದುಳಿದ ವರ್ಗಗಳ ಜಾತಿಪಟ್ಟಿ-2002ರ ಪ್ರವರ್ಗ-3(ಎ)ನಲ್ಲಿ ಕೊಡಗರು ಎಂದು ನಮೂದಾಗಿರುವುದನ್ನು ಕೊಡವ ಎಂದು ಬದಲಾಯಿಸಲು ನಿರ್ಧಾರ
  • ಆಶಾಕಿರಣ ಯೋಜನೆಯಡಿ ಒಟ್ಟು 29.14 ಕೋಟಿ ರೂ.ವೆಚ್ಚದಲ್ಲಿ ಚಿತ್ರದುರ್ಗ, ರಾಯಚೂರು, ಉತ್ತರ ಕನ್ನಡ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಉಚಿತವಾಗಿ ಸಮಗ್ರ ನೇತ್ರ ತಪಾಸಣೆ ಮತ್ತು ಕಣ್ಣಿನ ಶಸ್ತ್ರ ಚಿಕಿತ್ಸೆ ಹಾಗೂ ಕನ್ನಡಕ ವಿತರಿಸಲು ನಿರ್ಧಾರ
  • ಸರ್ಕಾರದ ವಿವಿಧ ಇಲಾಖೆ ಹಾಗೂ ನಿಗಮ ಮಂಡಳಿಗಳಲ್ಲಿ 15 ವರ್ಷ ಮೀರಿರುವ 15,295 ವಾಹನಗಳನ್ನು ಗುಜರಿಗೆ ಹಾಕಲು ಒಪ್ಪಿಗೆ

ಇದನ್ನೂ ಓದಿ: ಗಂಗಾವತಿ ನಗರಸಭೆ ವ್ಯಾಪ್ತಿಗೆ ಹಳ್ಳಿಗಳನ್ನು ಸೇರಿಸಲು ಮುಂದಾದ ಜಿಲ್ಲಾಡಳಿತ, ಗ್ರಾಮಸ್ಥರ ಆಕ್ರೋಶ 

 ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News