ಬಿಜೆಪಿ ಅಧಿಕಾರಕ್ಕೆ ಬಂದರೆ RSS ನಿಷೇಧ: ಉದ್ಧವ್ ಠಾಕ್ರೆ

ಶಿವಸೇನೆಯನ್ನು ಬಳಸಿ ಬಿಸಾಡಲು ಯತ್ನಿಸಿದ ರೀತಿಯ ಆಟವನ್ನು ಪ್ರಧಾನಿ ಮೋದಿಯವರು ಮುಂದಿನ ದಿನಗಳಲ್ಲಿ RSSನ ಜೊತೆಗೂ ಆಡಲಿದ್ದಾರೆ. ಈ ಬಗ್ಗೆ ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಈ ಹಿಂದೆಯೇ ಹೇಳಿದ್ದರು ಅಂತಾ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ. 

Written by - Puttaraj K Alur | Last Updated : May 19, 2024, 04:31 PM IST
  • ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ RSS ನಿಷೇಧಿಸಲು ಚಿಂತನೆ
  • RSS ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ
  • ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ RSS ಕಾರ್ಯಕರ್ತರಿಗೆ ದೊಡ್ಡ ಅಪಾಯ
ಬಿಜೆಪಿ ಅಧಿಕಾರಕ್ಕೆ ಬಂದರೆ RSS ನಿಷೇಧ: ಉದ್ಧವ್ ಠಾಕ್ರೆ title=
RSS ನಿಷೇಧಿಸಲು ಚಿಂತನೆ!

ನವದೆಹಲಿ: ಕೇಂದ್ರದಲ್ಲಿ 3ನೇ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ RSS ನಿಷೇಧಿಸಲು ಚಿಂತನೆ ನಡೆಸಿದೆ ಎಂದು ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.ಮುಂಬೈನಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಶಿವಸೇನೆಯನ್ನು ಬಳಸಿ ಬಿಸಾಡಲು ಯತ್ನಿಸಿದ ರೀತಿಯ ಆಟವನ್ನು ಪ್ರಧಾನಿ ಮೋದಿಯವರು ಮುಂದಿನ ದಿನಗಳಲ್ಲಿ RSSನ ಜೊತೆಗೂ ಆಡಲಿದ್ದಾರೆ. ಈ ಬಗ್ಗೆ ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಈ ಹಿಂದೆಯೇ ಹೇಳಿದ್ದರು ಅಂತಾ ಅವರು ತಿಳಿಸಿದ್ದಾರೆ. 

ಇದನ್ನೂ ಓದಿ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಅರೆಸ್ಟ್‌ ವಾರೆಂಟ್‌ ಜಾರಿ!

RSS ಅಗತ್ಯ ಇಲ್ಲಿಯವರೆಗೂ ಇತ್ತು. ಆದರೆ ಈಗ ನಾವು ಸಮರ್ಥರಾಗಿದ್ದೇವೆ.‌ ನಮಗೆ RSSನ ಅಗತ್ಯವಿಲ್ಲವೆಂದು ಅಂದು ಜೆ.ಪಿ.ನಡ್ಡಾ ಅವರೇ ಹೇಳಿದ್ದರು. ಹೀಗಾಗಿ ಬಿಜೆಪಿ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಅದು RSS ಕಾರ್ಯಕರ್ತರಿಗೆ ದೊಡ್ಡ ಅಪಾಯವನ್ನುಂಟು ಮಾಡುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಈ ಹಿಂದೆ ಕೇಂದ್ರ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ RSS ನಿಷೇಧಿಸಿದ್ದರು. ಹೀಗಾಗಿ ಕೇಂದ್ರದಲ್ಲಿ ಬಿಜೆಪಿ ಒಂದು ವೇಳೆ ಮತ್ತೆ ಅಧಿಕಾರಕ್ಕೆ ಬಂದರೆ RSS ನಿಷೇಧಿಸುವುದು ಖಚಿತವೆಂದು ಉದ್ಧವ್‌ ಠಾಕ್ರೆ ಹೇಳಿದ್ದಾರೆ.

ಇದನ್ನೂ ಓದಿ: ಗೃಹ ಇಲಾಖೆಯನ್ನು ಬೇರೆ ಯಾರೋ ಹೈಜಾಕ್‌‌ ಮಾಡಿದ್ದಾರೆ, ಸರ್ಕಾರವೇ ಅಪರಾಧಿ ಸ್ಥಾನದಲ್ಲಿದೆ: ಆರ್‌.ಅಶೋಕ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
    

Trending News