ಕರ್ನಾಟಕ ಬಜೆಟ್ ಅಧಿವೇಶನ ಆರಂಭ :ಗ್ಯಾರಂಟಿ ಯೋಜನೆಗಳ ಕುರಿತು ಪ್ರಸ್ತಾಪಿಸಿದ ಗೆಹ್ಲೋಟ್

Karnataka  budget session : ಇಂದು (ಫೆ.12ರಂದು ) ಆರಂಭವಾದ ಕರ್ನಾಟಕ ಬಜೆಟ್ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ವಿಧಾನಸಭೆ ಮತ್ತು ವಿಧಾನಪರಿಷತ್ ಜಂಟಿ ಅಧಿವೇಶವನ್ನು ಉದ್ದೇಶಿಸಿ ಮಾತನಾಡಿದರು. 

Written by - Zee Kannada News Desk | Last Updated : Feb 12, 2024, 03:01 PM IST
  • ಕರ್ನಾಟಕ ಬಜೆಟ್ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಅಧಿವೇಶವನ್ನು ಉದ್ದೇಶಿಸಿ ಮಾತನಾಡಿದರು.
  • 1.2 ಕೋಟಿ ಬಡತನ ರೇಖೆಯಲ್ಲಿದ್ದ ಜನರು ಮಧ್ಯಮ ರೇಖೆಯನ್ನು ತಲುಪುವಂತೆ ಮಾಡಿದೆ .
  • ಅದಕ್ಕೆ ತಕ್ಕಂತೆ ಇಂದು ಸರಕಾರ ಎಲ್ಲ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ.
ಕರ್ನಾಟಕ ಬಜೆಟ್ ಅಧಿವೇಶನ ಆರಂಭ :ಗ್ಯಾರಂಟಿ ಯೋಜನೆಗಳ ಕುರಿತು ಪ್ರಸ್ತಾಪಿಸಿದ ಗೆಹ್ಲೋಟ್  title=

Gehlot Speech in Karnataka Budget Session: ಕರ್ನಾಟಕಾ ಬಜೆಟ್ ಅಧಿವೇಶನ ಆರಂಭಗೊಂಡಿದ್ದು,  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ವಿಧಾನಸಭೆ ಮತ್ತು ವಿಧಾನಪರಿಷತ್ ಜಂಟಿ ಅಧಿವೇಶವನ್ನು ಉದ್ದೇಶಿಸಿ  ಮಾತನಾಡಿದರು. 

ಭಾಷಣದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಕುರಿತು ಪ್ರಸ್ತಾಪ ಮಾಡಿದರು. ಪ್ರಜೆಗಳ ವಿಶ್ವಾಸ, ನಂಬಿಕೆಯನ್ನು ಉಳಿಸಿಕೊಳ್ಳಲು ಸರ್ಕಾರ ನುಡಿದಂತೆ ನಡೆದಿದೆ. ಭರವಸೆ ಧಕ್ಕೆಯಾಗದಂತೆ ನಡೆದುಕೊಂಡಿದೆ. ರಾಜ್ಯದ 7 ಕೋಟಿ ಜನರ ಬದುಕು ಬದಲಾವಣೆಗೆ ಈ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಇದನ್ನು ಓದಿ : Radhika Pandit: ಪ್ರೇಮಿಗಳ ದಿನ ಟೈಮ್‌ನಲ್ಲಿ ಸ್ಯಾಂಡಲ್‌ವುಡ್‌ ಸಿಂಡ್ರೆಲಾಳ ನ್ಯೂ ಫೋಟೋಶೂಟ್‌!

ಸರ್ಕಾರವು ಶಕ್ತಿ, ಅನ್ನ ಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷ್ಮಿ ಮತ್ತು ಯುವನಿಧಿ ಎಂಬ ಐದು ಗ್ಯಾರಂಟಿ ಯೋಜನೆಗಳು ನೀಡುತ್ತೇವೆ ಎಂದು ಭರವಸೆ ನೀಡಿತ್ತು. ಅದಕ್ಕೆ ತಕ್ಕಂತೆ ಇಂದು ಸರಕಾರ ಎಲ್ಲ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ. 

ಇದನ್ನು ಓದಿ : Delhi Chalo protest: ದೆಹಲಿ ಚಲೋಗೆ ಹೊರಟಿದ್ದ ನೂರಾರು ರೈತರು ಪೊಲೀಸರ ವಶಕ್ಕೆ

1.2 ಕೋಟಿ ಬಡತನ ರೇಖೆಯಲ್ಲಿದ್ದ ಜನರು ಮಧ್ಯಮ ರೇಖೆಯನ್ನು ತಲುಪುವಂತೆ ಮಾಡಿದ್ದು, ಈ ನಿರ್ಣಯದಿಂದ ರಾಜ್ಯದ ೫ ಕೋಟಿಗೂ ಹೆಚ್ಚಿನ ಜನರು ಮಧ್ಯಮ ವರ್ಗದ ತಲುಪುತ್ತಿರುವುದು ಜಾಗತಿಕ ದಾಖಲೆಯಾಗಿದೆ ಎಂದು ಹೇಳಿದ್ದಾರೆ. ಕನ್ನಡ ಸಂಸ್ಕೃತಿಯನ್ನು ಉಳಿಸಿ, ಬೆಳೆಸಲು ಸರ್ಕಾರ ಬದ್ಧವಾಗಿದೆ. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ 'ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ- 2022 ಕಾಯ್ದೆಯನ್ನು ರೂಪಿಸಿಲಾಗಿದೆ. ಸದ್ಯದಲ್ಲೇ ಅನುಷ್ಠಾನಕ್ಕೆ ಬರಲಿದೆ ಎಂದು ಅವರು ಹೇಳಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News