ನಾವು ದ್ವೇಷದ ರಾಜಕಾರಣ ಮಾಡಿಲ್ಲ: ಸಿಎಂ ಉತ್ತರ ಖಂಡಿಸಿ ಬಿಜೆಪಿ ಸದಸ್ಯರ ಸಭಾತ್ಯಾಗ

ಸಿಎಂ ಸಿದ್ದರಾಮಯ್ಯ ತಮ್ಮ ಇಲಾಖೆಯಲ್ಲಿ ಭ್ರಷ್ಟಾಚಾರ ಆಗಿದೆ ಅಂತಾ ನಾವು ಹೇಳಿಲ್ಲ. ಅವರ ಇಲಾಖೆಯಲ್ಲಿ ಆಗಿಲ್ಲ ಅಂತಾ ಹೇಳುತ್ತಿದ್ದಾರೆ. ಬೇರೆ ಕಡೆ ಆಗಿರಬಹುದು ಎನ್ನುವ ಮಾತು ಆಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Written by - Prashobh Devanahalli | Edited by - Puttaraj K Alur | Last Updated : Jul 13, 2023, 07:34 PM IST
  • ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯರಿಂದ ಸಿಗದ ಸಮರ್ಪಕ‌ ಉತ್ತರ
  • ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿ ಬದಲು 3 ಕೆಜಿ ಅಕ್ಕಿ ನೀಡುತ್ತಿರುವುದಕ್ಕೆ ವಿರೋಧ
  • ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಸಭಾತ್ಯಾಗ
ನಾವು ದ್ವೇಷದ ರಾಜಕಾರಣ ಮಾಡಿಲ್ಲ: ಸಿಎಂ ಉತ್ತರ ಖಂಡಿಸಿ ಬಿಜೆಪಿ ಸದಸ್ಯರ ಸಭಾತ್ಯಾಗ title=
ಬಿಜೆಪಿ ಸದಸ್ಯರ ಸಭಾತ್ಯಾಗ

ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಲಿನ ಚರ್ಚಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಪಕ‌ ಉತ್ತರ ನೀಡಿಲ್ಲವೆಂದು ಖಂಡಿಸಿ, ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಯ ಬದಲು 3 ಕೆಜಿ ಅಕ್ಕಿ ಕೊಡುತ್ತಿರುವುದನ್ನು ವಿರೋಧಿಸಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಸಭಾತ್ಯಾಗ ನಡೆಸಿದರು.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯರ ಉತ್ತರಕ್ಕೆ ಆಕ್ಷೇಪಿಸಿ ಮಾತನಾಡಿದ ಬೊಮ್ಮಾಯಿ, ‘ನಾವು ಸೇಡಿನ ರಾಜಕಾರಣ ಮಾಡಿಲ್ಲ. ನಿಮ್ಮ ಕಾಲದಲ್ಲಿ ಆಗಿರುವ ಭ್ರಷ್ಟಾಚಾರಗಳ ತನಿಖೆಯನ್ನು ಲೋಕಾಯುಕ್ತ ಮಾಡುತ್ತಿದೆ. ನಿಮ್ಮ ಅವಧಿಯಲ್ಲಿ ಭ್ರಷ್ಟಾಚಾರ ಆಗಿಲ್ಲ ಅಂತಾ ಅಲ್ಲ. ಆ ಪ್ರಕರಣಗಳು ಈಗಲೂ ಜೀವಂತವಾಗಿವೆ. ತನಿಖೆ ನಡೆಸಿದರೆ ಎಲ್ಲಾ ಹೊರ ಬರುತ್ತದೆ’ ಎಂದು ಹೇಳಿದರು.

ಸಿಎಂ ಹಿಂದಿನ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ನಾವು ಇಲ್ಲಿ ಏನು ಮಾತನಾಡಿದ್ದೇವೆ, ಹೊರಗಡೆ ಅದನ್ನೇ ಜನರು ಮಾತನಾಡುತ್ತಿದ್ದಾರೆ. ಸಿಎಂ ತಮ್ಮ ಇಲಾಖೆಯಲ್ಲಿ ಭ್ರಷ್ಟಾಚಾರ ಆಗಿದೆ ಅಂತಾ ನಾವು ಹೇಳಿಲ್ಲ. ಅವರ ಇಲಾಖೆಯಲ್ಲಿ ಆಗಿಲ್ಲ ಅಂತಾ ಹೇಳುತ್ತಿದ್ದಾರೆ. ಬೇರೆ ಕಡೆ ಆಗಿರಬಹುದು ಎನ್ನುವ ಮಾತು ಆಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಸಿಸಿಟಿವಿಯಲ್ಲಿ ಸೆರೆಯಾಗಿದೆ ಆರೋಪಿಗಳು ಎಸ್ಕೇಪ್ ಆಗೋ ದೃಶ್ಯ

ನಮ್ಮ ಕಾಲದ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದೀರಿ, ನೀವು ತನಿಖೆ ಮಾಡಿ ನಿಮ್ಮ ಬಳಿ ಅಧಿಕಾರ ಇದೆ. ನಾವು ಯಾವುದೆ ತಪ್ಪು ಮಾಡಿಲ್ಲ. ನಮಗೆ ಯಾವುದೇ ಭಯ ಇಲ್ಲ. ನಿಮ್ಮ ಅವಧಿಯಲ್ಲಿ ಆಗಿದ್ದ ಭ್ರಷ್ಟಾಚಾರ ಆರೋಪಗಳ ಬಗ್ಗೆ ಲೋಕಾಯುಕ್ತದಲ್ಲಿ ತನಿಖೆ ನಡೆಯುತ್ತಿದೆ. ಅವುಗಳನ್ನು ಸೇರಿಸಿ ತನಿಖೆ ಮಾಡಿಸಿ, ನಾವ್ಯಾರು ಬೇಡ ಅಂತಾ ಹೇಳಿಲ್ಲ. ನಿಮ್ಮ ಬಳಿ ಅಧಿಕಾರ ಇದೆ. ತನಿಖಾ ಸಂಸ್ಥೆಗಳು ಇವೆ. ನಮ್ಮ ಅವಧಿ ನಿಮ್ಮ ಅವಧಿಯಲ್ಲಾಗಿರುವ ಎಲ್ಲಾ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಿ ನಮಗೇನು ತೊಂದರೆ ಇಲ್ಲ ಎಂದರು.

ಸಿದ್ದರಾಮಯ್ಯರಿಂದಲೇ ಆಪರೇಷನ್ ಹಸ್ತ ಆರಂಭ!

ರಾಜ್ಯದಲ್ಲಿ ಆಪರೇಷನ್ ಹಸ್ತ ಸಿದ್ದರಾಮಯ್ಯ ಅವರಿಂದಲೇ ಆರಂಭವಾಗಿದ್ದು, 2007ರಲ್ಲಿ ನೀವು ಜೆಡಿಎಸ್ ತೊರೆದು ರಾಜಿನಾಮೆ ಕೊಟ್ಟು ಕಾಂಗ್ರೆಸ್ ಸೇರಿ ಚುನಾವಣೆ ಗೆದ್ದು ಬಂದಿದ್ದೀರಿ. ಅದೇ ರೀತಿ ಅವರೂ ಮಾಡಿದ್ದಾರೆ. ಅವರಿಗೂ ನಿಮಗೂ ಏನು ವ್ಯತ್ಯಾಸ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷ 80ರ ನಂತರ ಒಮ್ಮೆ ಅಧಿಕಾರಕ್ಕೆ ಬಂದ ಮೇಲೆ ಮತ್ತೆ ಅಧಿಕಾರಕ್ಕೆ ಬಂದಿಲ್ಲ. ನಿಮ್ಮ ಪರಿಸ್ಥಿತಿಯೂ ಹಾಗೆಯೇ ಇದೇ. 2013ರಲ್ಲಿ ಅಧಿಕಾರ ನಡೆಸಿ ಎಲ್ಲಾ ಭಾಗ್ಯಗಳನ್ನು ಕೊಟ್ಟರೂ ನೀವು ಯಾಕೆ ಸೋತಿರಿ, ನಿಮ್ಮನ್ನೂ ಜನರು ತಿರಸ್ಕರಿಸಿದ್ದರು‌ ಎಂದರು.

2004ರಲ್ಲಿ ಕಾಂಗ್ರೆಸ್ 65 ಸೀಟು ಬಂದಿತ್ತು, ಆಗೇನು ಬಹುಮತ‌ ಇತ್ತಾ ಇವರಿಗೆ? 2018ರಲ್ಲಿ ಇವರಿಗೆ ಬಹುಮತ ಇತ್ತಾ? ಯಾರಿಗೆ ಬಹುಮತದ ಪಾಠ ಹೇಳಿಕೊಳ್ಳುತ್ತಾರೆ ಇವರು. 1983ರಲ್ಲೂ ಜನತಾ ಪಕ್ಷಕ್ಕೆ ಬಹುಮತ  ಇರಲಿಲ್ಲ‌, ಆಗಲೂ ಸರ್ಕಾರ ಮಾಡಿದ್ದರು. ಆಗಿನಿಂದಲೂ ಮೈತ್ರಿ ಸರ್ಕಾರ ಆರಂಭವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಶಾಶ್ವತ ಸದಸ್ಯತ್ವ ಬೇಕೆಂದು ಪ್ರಧಾನಿ ಮೋದಿ ಬೀಗಿ ಪಟ್ಟು 

ಅಕ್ಕಿ ಕಡಿತ ಅನ್ಯಾಯ: ಕೇಂದ್ರ ಸರ್ಕಾರ ಆಹಾರ ಭದ್ರತೆ‌ ಕಾಯ್ದೆ ಪ್ರಕಾರ 5 ಕೆಜಿ ಅಕ್ಕಿ ಕೊಟ್ಟಿದ್ದು, ನೀವು 3 ಕೆಜಿ ಕೊಡುತ್ತಿದ್ದೀರಿ ನಿಮಗೆ ನಾಚಿಕೆಯಾಗಬೇಕು ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದರು.  ಅಕ್ಕಿ ಕೇಳಲು ಕೇಂದ್ರ ಸರ್ಕಾರದ‌ ಜೊತೆ ಮಾತನಾಡದೇ ಡೆಪ್ಯುಟಿ ಮ್ಯಾನೇಜರ್ ಹತ್ತಿರ ಹೋಗಿ ಕೇಳಿದರೆ ಅವರಿಗೆ ಅಕ್ಕಿ ಕೊಡುವ ಅಧಿಕಾರ ಇದೆಯಾ? ಎಫ್‍ಸಿಐ ಕೇಂದ್ರ ಸರ್ಕಾರದ ಏಜೆನ್ಸಿ, 5 ವರ್ಷ ಅಧಿಕಾರ ನಡೆಸಿದ್ದಾರೆ, ಯಾರೊಂದಿಗೆ ಮಾತನಾಡಬೇಕು ಅನ್ನುವ ಸಾಮಾನ್ಯ ಜ್ಞಾನ ಇಲ್ಲವೆಂದು ವಾಗ್ದಾಳಿ ನಡೆಸಿ ಮುಖ್ಯಮಂತ್ರಿಗಳ ಉತ್ತರ ಖಂಡಿಸಿ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News