ಜೂನ್ ಮೊದಲ ವಾರದಲ್ಲಿ ಎಂಎಲ್ಸಿ ಚುನಾವಣೆ ಹಾಗೂ ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮದ್ಯ ಮಾರಾಟ ಸ್ಥಗಿತಗೊಳ್ಳಲಿದೆ. ನಗರದ ಅಬಕಾರಿ ಇಲಾಖೆ ಹಾಗೂ ವ್ಯಾಪಾರ ಸಂಸ್ಥೆಗಳಿಗೆ ಬಿಸಿ ಮುಟ್ಟಿಸುವ ನಿರೀಕ್ಷೆ ಇದೆ. ಕರ್ನಾಟಕದಲ್ಲಿ ಜೂನ್ 1 ಮತ್ತು ಜೂನ್ (ಜೂನ್ 5 ಹೊರತುಪಡಿಸಿ) ನಡುವೆ ಮದ್ಯವನ್ನು ಮಾರಾಟ ಮಾಡುವಂತಿಲ್ಲ.
ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ 'ವಿಭಾ ಸಾಹಿತ್ಯ ಪ್ರಶಸ್ತಿ-೨೦೨೪'ಕ್ಕಾಗಿ ಕನ್ನಡದ ಕವಿ/ಕವಿಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು, ಐವತ್ತರ ಒಳಗಿರುವ ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವಿತೆಗಳು ಬೇಡ. ಚುಟುಕು, ಹನಿಗವನಗಳು ಬೇಡ. ಈ ಪ್ರಶಸ್ತಿಯು ರೂ. ೧೦,೦೦೦/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ನಮ್ಮ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ದೆಹಲಿ ನಾಯಕರ ಜತೆ ಚರ್ಚೆ ಮಾಡಿ ಎಲ್ಲಾ ವರ್ಗದ 65 ಸಂಭಾವ್ಯರ ಪಟ್ಟಿಯನ್ನು ಕೊಟ್ಟು ಬಂದಿದ್ದೇವೆ. ಉಳಿದಂತೆ ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಮಾಡಲಿದ್ದಾರೆ.
ಕೇರಳದಲ್ಲಿ ನನ್ನ, ಮುಖ್ಯಮಂತ್ರಿಗಳ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಯಾಗ ಮಾಡಲಾಗುತ್ತಿದೆ. ಕೇರಳದ ರಾಜರಾಜೇಶ್ವರಿ ದೇವಾಲಯದ ಆಸುಪಾಸಿನ ನಿರ್ಜನ ಪ್ರದೇಶದಲ್ಲಿ ಶತ್ರು ಸಂಹಾರ ಉದ್ದೇಶದ "ರಾಜಕಂಟಕ", "ಮಾರಣ ಮೋಹನ ಸ್ತಂಭನ" ಯಾಗ ಪ್ರಯೋಗ ನಡೆಸಲಾಗುತ್ತಿದೆ.
Basavaraj Bommai: (ಹೊಸಪೇಟೆ) ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ.
R Ashok: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ದಲಿತರ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಜೂನ್ 6 ರೊಳಗೆ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.
ಬೆಳೆ ಸಾಲ ಪಡೆದ ರೈತರು ಇಚ್ಛೆ ಪಡದೇ ಇದ್ದಲ್ಲಿ ತಮ್ಮ ವ್ಯಾಪ್ತಿಯ ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳ ಮುಂಚಿತವಾಗಿ ಲಿಖಿತವಾಗಿ ಮುಚ್ಛಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುತ್ತದೆ.
ಜೂನ್ 03 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಮತದಾನಕ್ಕೆ ನೋಂದಣಿ ಮಾಡಿಕೊಂಡಿರುವ ಎಲ್ಲಾ ಪದವೀಧರ ಮತದಾರರಿಗೆ ಮತದಾನ ಮಾಡಲು ಜೂನ್ 03 ರಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.