ನ್ಯೂಯಾರ್ಕ್ ಕನ್ನಡ ಕೂಟದಲ್ಲಿ ಸಚಿವ ನಿರಾಣಿ ಭಾಗಿ: ಉತ್ತರ ಕರ್ನಾಟಕ ಸಂಘದ ಪೋಸ್ಟರ್ ಬಿಡುಗಡೆ

ಜಾಗತಿಕ‌ ಬಂಡವಾಳ ಹೂಡಿಕೆದಾರರ ಸಮಾವೇಶದ ಭಾಗವಾಗಿ ಅಂತಾರಾಷ್ಟ್ರೀಯ ರೋಡ್ ಶೋ ಹಮ್ಮಿಕೊಳ್ಳಲಾಗಿತ್ತು.

Written by - Zee Kannada News Desk | Edited by - Bhavishya Shetty | Last Updated : Sep 6, 2022, 02:04 PM IST
    • ನ್ಯೂಯಾರ್ಕ್ ಕನ್ನಡ ಕೂಟ ಆಯೋಜಿಸಿದ್ದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕಾರ್ಯಕ್ರಮ
    • ಸಚಿವ ಡಾ. ಮುರುಗೇಶ ಆರ್ ನಿರಾಣಿ ಭೇಟಿ
    • ಉತ್ತರ ಕರ್ನಾಟಕ ಸಂಘದ ಪೋಸ್ಟರ್ ಬಿಡುಗಡೆ
ನ್ಯೂಯಾರ್ಕ್ ಕನ್ನಡ ಕೂಟದಲ್ಲಿ ಸಚಿವ ನಿರಾಣಿ ಭಾಗಿ: ಉತ್ತರ ಕರ್ನಾಟಕ ಸಂಘದ ಪೋಸ್ಟರ್ ಬಿಡುಗಡೆ title=
Minister Murugesh Nirani

ನ್ಯೂಯಾರ್ಕ್ ಕನ್ನಡ ಕೂಟ ಆಯೋಜಿಸಿದ್ದ ಸ್ವಾತಂತ್ರ್ಯದ ಅಮೃತ ಮಹೋತ್ಸವದ  ಕಾರ್ಯಕ್ರಮದಲ್ಲಿ ಬೃಹತ್ ಮತ್ತು‌ ಮಧ್ಯಮ‌ ಕೈಗಾರಿಕೆ ಸಚಿವ ಡಾ. ಮುರುಗೇಶ ಆರ್ ನಿರಾಣಿ ಭೇಟಿ ನೀಡಿದ್ದಾರೆ.

ಜಾಗತಿಕ‌ ಬಂಡವಾಳ ಹೂಡಿಕೆದಾರರ ಸಮಾವೇಶದ ಭಾಗವಾಗಿ ಅಂತಾರಾಷ್ಟ್ರೀಯ ರೋಡ್ ಶೋ ಹಮ್ಮಿಕೊಳ್ಳಲಾಗಿತ್ತು. ಇನ್ನು ಇದೇ ಸಂದರ್ಭದಲ್ಲಿ ಉತ್ತರ ಅಮೆರಿಕದಲ್ಲಿರುವ ಉತ್ತರ ಕರ್ನಾಟಕ ಸಂಘದ ಪೋಸ್ಟರ್ ನ್ನು ಸಹ ಬಿಡುಗಡೆ ಮಾಡಿದರು. ಸ್ವಾತಂತ್ರ್ಯದ ಅಮೃತ ಮಹೋತ್ಸವದ  ಹಿನ್ನೆಲೆಯಲ್ಲಿ ನ್ಯೂಯಾರ್ಕ್ ಕನ್ನಡ ಕೂಟ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. 

ಇದನ್ನೂ ಓದಿ: ಟ್ಯಾಂಕರ್ ಹರಿದು ಮಹಿಳೆ ಸಾವು: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಇನ್ನೊಂದೆಡೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ನೇತೃತ್ವದ ಇಲಾಖೆ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಂಡಿದೆ.

ಕರ್ನಾಟಕ ಕೈಗಾರಿಕಾ ಇಲಾಖೆ ಭೂಮಿ ಹಂಚಿಕೆ ವ್ಯವಸ್ಥೆ ಸರಳೀಕರಣಗೊಳಿಸಿದೆ. ‘ಈಸ್ ಆಫ್ ಡುಯಿಂಗ್ ಬಿಸಿನೆಸ್’ ಮಾದರಿಯಲ್ಲಿ ‘ಈಸ್ ಆಫ್ ಲ್ಯಾಂಡ್ ಅಲಾಟ್‌ಮೆಂಟ್’ ಪದ್ದತಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಹೊಸ ಆದೇಶದ ಮೂಲಕ ಜಾರಿಗೊಳಿಸಿದೆ.

ಭೂ ಪರಿಶೋಧನಾ ಸಮಿತಿಯಲ್ಲಿ(LAC) 10 ಎಕರೆವರೆಗಿನ ಭೂಮಿ ಹಂಚಿಕೆಗೆ  ಪರಿಶೀಲನೆ ಅವಶ್ಯವಿಲ್ಲ ಎಂದು ಹೊಸ ಆದೇಶ ಸ್ಪಷ್ಟಪಡಿಸಿದೆ. ಹೂಡಿಕೆ ಪ್ರಸ್ತಾವನೆಗಳು ಈಗ ನೇರವಾಗಿ ರಾಜ್ಯಮಟ್ಟದ ಸಮಿತಿಯ ಮುಂದೆ ಮಂಡನೆಯಾಗಲಿವೆ.

ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬರುವ ಉದ್ಯಮಗಳಿಗೆ ಅಗತ್ಯವಿರುವ ಭೂಮಿಯನ್ನು ಸುಲಭವಾಗಿ ನೀಡುವುದು ಇದರ ಮುಖ್ಯ ಉದ್ದೇಶ. ಸುಲಲಿತ ವ್ಯವಹಾರದಲ್ಲಿ ದೇಶದಲ್ಲೇ ಮುಂಚೂಣಿ ಸ್ಥಾನದಲ್ಲಿರುವ ರಾಜ್ಯಕ್ಕೆ ಹೆಚ್ಚು ಹೆಚ್ಚು ಉದ್ಯಮಗಳನ್ನು ಆಕರ್ಷಿಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. 

ಇದನ್ನೂ ಓದಿ: ಮಳೆ ಅವಾಂತರಕ್ಕೆ ಯಳಂದೂರು ತತ್ತರ : ಪೊಲೀಸ್ ಠಾಣೆ, ಶಾಲಾ-ಕಾಲೇಜು ಮುಳುಗಡೆ!

ಈ ಬಗ್ಗೆ ಮಾತನಾಡಿದ ಸಚಿವ ಮುರುಗೇಶ್ ನಿರಾಣಿ, ಹೂಡಿಕೆದಾರರ ಅಗತ್ಯಗಳನ್ನು ಅರ್ಥಮಾಡಿಕೊಂಡು ಭೂಮಂಜೂರಾತಿ ಪ್ರಕ್ರಿಯೆಯಲ್ಲಿ ತಿದ್ದುಪಡಿ ಮಾಡಲು ಅವಕಾಶಮಾಡಿಕೊಟ್ಟಿದ್ದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಅವರಿಗೆ ಧನ್ಯವಾದ. ಏಕಗವಾಕ್ಷಿ ಅನುಮೋದನಾ ವ್ಯವಸ್ಥೆಯನ್ನುಸರಳೀಕರಣಗೊಳಿಸುವ ಮೂಲಕ ಸುಲಲಿತಕ್ಕೆ ವ್ಯವಹಾರ ಹಾಗೂಪಾರದರ್ಶಕತೆಗೆ ಒತ್ತು ನೀಡಿ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ. ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ತ್ವರಿತವಾಗಿ ಅನುಮೋದನೆಪಡೆಯಲು ಸಾಧ್ಯವಾಗಲಿದೆ.

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News