ನ್ಯಾಷನಲ್ ಹೆರಾಲ್ಡ್ ಪ್ರಕರಣ: ಒಂದೆಡೆ ರಾಹುಲ್‌ ವಿಚಾರಣೆ, ಇನ್ನೊಂದೆಡೆ ಕಾಂಗ್ರೆಸ್ ಪ್ರತಿಭಟನೆ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಲಿದ್ದು, ಇಂದು ಕಚೇರಿಗೆ ಭೇಟಿ ನೀಡಿದ್ದಾರೆ. ಮೂವರು ಇಡಿ ಅಧಿಕಾರಿಗಳು ರಾಹುಲ್ ಗಾಂಧಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಪಿಎಂಎಲ್‌ಎ ಸೆಕ್ಷನ್ 50ರ ಅಡಿಯಲ್ಲಿ ರಾಹುಲ್ ಗಾಂಧಿ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುತ್ತದೆ. ವಿಚಾರಣೆ ವೇಳೆ ಇಡಿ ಅಧಿಕಾರಿಗಳು ಕೇಳುವ ಪ್ರಶ್ನೆಗೆ ರಾಹುಲ್‌ರಿಂದ ಲಿಖಿತ ಉತ್ತರ ಪಡೆಯಲಾಗುತ್ತದೆ. 

1 /7

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ಮುಂದೆ ಹಾಜರಾಗಲು ರಾಹುಲ್ ಗಾಂಧಿ ಬಂದಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ನೂರಾರು ಕಾರ್ಯಕರ್ತರು ಜೊತೆಗೂಡಿ ಜಾರಿ ನಿರ್ದೇಶನಾಲಯ ಕಚೇರಿವರೆಗೆ ಮೆರವಣಿಗೆ ನಡೆಸಿದ್ದಾರೆ.

2 /7

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ನೀಡಿದ್ದಕ್ಕಾಗಿ ಕಾಂಗ್ರೆಸ್ ಮುಖಂಡ ಕೋಡಿಕುನ್ನಿಲ್ ಸುರೇಶ್ ಸೋಮವಾರ ದೆಹಲಿಯ ಇಡಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.  

3 /7

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ನೀಡುವಾಗ ಇಡಿ ಕಚೇರಿ ಬಳಿ ಮಾಧ್ಯಮದ ಸಿಬ್ಬಂದಿ ಮತ್ತು ಪೊಲೀಸರು ಹಾಜರಿದ್ದರು.

4 /7

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ

5 /7

ಜಾರಿ ನಿರ್ದೇಶನಾಲಯವನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಜಮ್ಮುವಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು

6 /7

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ನೀಡಿರುವುದನ್ನು ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ.

7 /7

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ರಾಹುಲ್ ಗಾಂಧಿಗೆ ಸಮನ್ಸ್ ನೀದೆ. ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರು ಪಾಟ್ನಾದಲ್ಲಿಯೂ ಇಡಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.