ನಿರಾಣಿ ನೇತೃತ್ವದ ನಿಯೋಗ ಅಮೆರಿಕಾಗೆ ಪ್ರಯಾಣ: ಬಂಡವಾಳ ಹೂಡಿಕೆ ಸಂಬಂಧ ಮಾತುಕತೆ

2022ರ ನವೆಂಬರ್ 2,3 ಮತ್ತು 4 ರಂದು ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಪೂರ್ವಭಾವಿಯಾಗಿ ಬಂಡವಾಳ ಹೂಡಿಕೆಗೆ ಆಕರ್ಷಿಸಲು ಡಾ. ಮುರುಗೇಶ ಆರ್ ನಿರಾಣಿ ನೇತೃತ್ವದ ನಿಯೋಗ ಅಮೆರಿಕಕ್ಕೆ ಭೇಟಿ ನೀಡಿದೆ. ಈ ಸಂದರ್ಭದಲ್ಲಿ ಅಲ್ಲಿನ ಪ್ರಮುಖರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

1 /4

ಜಾಗತಿಕ‌ ಬಂಡವಾಳ ಹೂಡಿಕೆದಾರರ ಸಮಾವೇಶದ ಭಾಗವಾಗಿ ಅಂತಾರಾಷ್ಟ್ರೀಯ ರೋಡ್ ಶೋ ಕೈಗೊಂಡಿರುವ ಕಾರ್ಯಕ್ರಮದಲ್ಲಿ ಬೃಹತ್ ಮತ್ತು‌ ಮಧ್ಯಮ‌ ಕೈಗಾರಿಕೆ ಸಚಿವ ಡಾ. ಮುರುಗೇಶ ಆರ್ ನಿರಾಣಿ ಅವರು ಭಾಗವಹಿಸಿದರು.  ಈ ಸಂದರ್ಭದಲ್ಲಿ ಅಮೆರಿಕದಲ್ಲಿರುವ ಭಾರತೀಯ ರಾಯಭಾರಿ ತರಣಜೀತ್ ಸಿಂಗ್  ಸಂಧು ಅವರನ್ನು ವಾಷಿಂಗ್ಟನ್‌ನಲ್ಲಿ ಭೇಟಿಯಾಗಿ, ಕರ್ನಾಟಕದಲ್ಲಿ ಹೂಡಿಕೆಗೆ ಇರುವ ಅವಕಾಶಗಳನ್ನು ವಿವರಿಸಿದರು.

2 /4

ಬೆಂಗಳೂರು ಅರಮನೆಯಲ್ಲಿ ನವೆಂಬರ್ 2ರಿಂದ 4ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು‌ ಕೈಗಾರಿಕೆ ಇಲಾಖೆಯ ಅಪರ ಮುಖ್ಯ  ಕಾರ್ಯದರ್ಶಿ ಡಾ. ಇ.ವಿ ರಮಣರೆಡ್ಡಿ ಹಾಗೂ ಇತರ ಅಧಿಕಾರಿಗಳನ್ನು ಉಪಸ್ಥಿತಿರಿದ್ದರು.

3 /4

ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಡಾ. ಮುರುಗೇಶ ಆರ್ ನಿರಾಣಿ  ವಾಷಿಂಗ್ಟನ್‌ನಲ್ಲಿ ಗುರುವಾರ ಸಂಜೆ ಲಾಕ್ಹೀಡ್ ಮಾರ್ಟಿನ್‌ನ ಡೇವ್ ಸಟನ್, ರಾಬರ್ಟ್ ಗಾರ್ನರ್, ಮಾರ್ಕ್ ರಿಡಲ್ ಮತ್ತು ಡೌ ಹ್ಯಾಸ್ಕಿನ್ಸ್ ಅವರನ್ನು ಭೇಟಿಯಾದರು.

4 /4

ಕರ್ನಾಟಕದಲ್ಲಿ  ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ, ಕೌಶಲಾಭಿವೃದ್ಧಿ ಕೇಂದ್ರ ಮತ್ತು ಸಿಕೋರ್ಸ್ಕಿ ಹೆಲಿಕಾಪ್ಟರ್ ತಯಾರಿಕಾ ಘಟಕ ಸ್ಥಾಪನೆ ಸಂಬಂಧ ವಿಮಾನಯಾನ ಕಂಪನಿಗಳ ಪ್ರಮುಖರೊಂದಿಗೆ ಸಚಿವರು ಚರ್ಚಿಸಿದರು. ಈ ಸಂದರ್ಭದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ ರಮಣ ರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ  ಗುಂಜನ್ ಕೃಷ್ಣ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು