Viral Video: ಪೊಲೀಸರ ಮೇಲೆಯೇ ಉಗುಳಿದ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ..!

ನ್ಯಾಷನ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇ.ಡಿ ಅಧಿಕಾರಿಗಳು ಸತತವಾಗಿ ಡ್ರಿಲ್ ನಡೆಸುತ್ತಿದ್ದಾರೆ. 

Written by - Puttaraj K Alur | Last Updated : Jun 21, 2022, 07:57 PM IST
  • ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇ.ಡಿ ವಿಚಾರಣೆ ವಿರೋಧಿಸಿ ಪ್ರತಿಭಟನೆ
  • ವಶಕ್ಕೆ ಪಡೆದ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಉಗುಳಿದ ನೆಟ್ಟಾ ಡಿಸೋಜಾ
  • ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆಯ ಅನಾಗರಿಕ ವರ್ತನೆಗೆ ವ್ಯಾಪಕ ಆಕ್ರೋಶ
Viral Video: ಪೊಲೀಸರ ಮೇಲೆಯೇ ಉಗುಳಿದ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ..! title=
ಪೊಲೀಸ್ ಸಿಬ್ಬಂದಿ ಮೇಲೆ ಉಗುಳಿದ ನೆಟ್ಟಾ ಡಿಸೋಜಾ

ನವದೆಹಲಿ: ನ್ಯಾಷನ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇ.ಡಿ ಅಧಿಕಾರಿಗಳು ಸತತವಾಗಿ ಡ್ರಿಲ್ ನಡೆಸುತ್ತಿದ್ದಾರೆ. ಇ.ಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ದೇಶದಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ವೇಳೆ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮೇಲೆಯೇ ಕಾಂಗ್ರಸ್ ಮಹಿಳಾ ಘಟಕದ ಅಧ್ಯಕ್ಷೆ ನೆಟ್ಟಾ ಡಿಸೋಜಾ ಉಗುಳಿ ಅನಾಗರಿಕರಂತೆ ವರ್ತಿಸಿದ್ದಾರೆ.

ಹೌದು, ರಾಹುಲ್ ಇ.ಡಿ ವಿಚಾರಣೆ ವಿರೋಧಿಸಿ ಪ್ರತಿಭಟಿಸುತ್ತಿದ್ದ ವೇಳೆ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ನೆಟ್ಟಾ ಡಿಸೋಜಾ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಈ ವೇಳೆ ‘ಕೈ’ ನಾಯಕರು ಮತ್ತು ನೂರಾರು ಕಾರ್ಯಕರ್ತರು ಬ್ಯಾರಿಕೇಡ್ ತಳ್ಳಿ ಪೊಲೀಸರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರು ಸೇರಿದಂತೆ ಅನೇಕ ಕಾರ್ಯಕರ್ತರನ್ನು ಖಾಕಿಪಡೆ ವಶಕ್ಕೆ ಪಡೆದಿತ್ತು.

ಇದನ್ನೂ ಓದಿ: ‘ಕಾಶ್ಮೀರವನ್ನು ಪಾಕಿಸ್ತಾನಕ್ಕೆ ನೀಡಬೇಕೆ?’: ವಿವಾದಕ್ಕೆ ಎಡೆಮಾಡಿಕೊಟ್ಟ ನಾಗರಿಕ ಸೇವಾ ಪರೀಕ್ಷೆಯ ಪ್ರಶ್ನೆ

ಈ ವೇಳೆ ನೆಟ್ಟಾ ಡಿಸೋಜಾರನ್ನು ವಶಕ್ಕೆ ಪಡೆದ ಪೊಲೀಸರು ಅವರನ್ನು ವಾಹನದೊಳಕ್ಕೆ ಕರೆದೊಯ್ಯಲು ಪ್ರಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ನೆಟ್ಟಾ ಡಿಸೋಜಾ ಅವರು ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಉಗುಳಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು, ಲಕ್ಷಾಂತರ ಜನರು ವೀಕ್ಷಿಸಿದ್ದಾರೆ.

ನೆಟ್ಟಾ ಡಿಸೋಜಾರ ಈ ಅನಾಗರಿಕ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ದೇಶದಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಕಾಂಗ್ರೆಸ್ ಮುಖಂಡೆಯ ಈ ವರ್ತನೆಗೆ ನೆಟಿಜನ್‍ಗಳು ಕಿಡಿಕಾರಿದ್ದಾರೆ. ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂಬ ಆಗ್ರಹ ಕೇಳಿಬರುತ್ತಿದೆ.

ಇದನ್ನೂ ಓದಿ: BIGG NEWS : ಸಂಕಷ್ಟದಲ್ಲಿ ಉದ್ಧವ್ ಠಾಕ್ರೆ! ಪತನವಾಗುತ್ತಾ ‘ಮಹಾ ಸರ್ಕಾರ’..?

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News